Revelation 4:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ನಾನು ನೋಡಿದಾಗ ನನ್ನ ಎದುರಿನಲ್ಲಿ ಪರಲೋಕದ ಬಾಗಿಲು ತೆರೆದಿರುವುದನ್ನು ಕಂಡೆನು. ನನ್ನ ಜೊತೆಯಲ್ಲಿ ಮೊದಲು ಮಾತನಾಡಿದ್ದ ಧ್ವನಿಯೇ ಮತ್ತೆ ನನ್ನೊಂದಿಗೆ ಮಾತಾಡಿತು. ಆ ಧ್ವನಿಯು ತುತೂರಿಯ ಧ್ವನಿಯಂತಿತ್ತು. ಆ ಧ್ವನಿಯು, “ಇಲ್ಲಿಗೆ ಹತ್ತಿ ಬಾ. ಮುಂದೆ ಸಂಭವಿಸುವುದನ್ನು ನಾನು ನಿನಗೆ ತೋರಿಸುತ್ತೇನೆ” ಎಂದು ಹೇಳಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, “ಇಲ್ಲಿಗೆ ಏರಿ ಬಾ, ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು.
Kannada BSI Bible 2016
ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ನನ್ನ ಸಂಗಡ ತುತೂರಿಯು ಮಾತನಾಡುತ್ತದೊ ಎಂಬಂತೆ ನಾನು ಮೊದಲು ಕೇಳಿದ್ದ ಧ್ವನಿಯು ನನಗೆ ಕೇಳಿಸಿತು; ಅದು--ಇಲ್ಲಿಗೆ ಮೇಲಕ್ಕೇರಿ ಬಾ, ಮುಂದೆ ಆಗತಕ್ಕವುಗಳನ್ನು ನಾನು ನಿನಗೆ ತೋರಿ ಸ
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳಾದ ಮೇಲೆ ನಾನು ನೋಡಿದಾಗ ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ಮತ್ತು ನನ್ನ ಸಂಗಡ ತುತೂರಿಯು ಮಾತಾಡುತ್ತದೋ ಎಂಬಂತೆ ನಾನು ಮೊದಲು ಕೇಳಿದ್ದ ವಾಣಿಯು ಕೇಳಿಸಿತು. ಇಲ್ಲಿಗೆ ಏರಿ ಬಾ, ಮುಂದೆ ಆಗಬೇಕಾದವುಗಳನ್ನು ನಿನಗೆ ತೋರಿಸುವೆನು ಎಂದು ಹೇಳಿತು. ಕೂಡಲೆ ದೇವರಾತ್ಮವಶನಾದೆನು.
Kannada Bible (KNCL) BSI 2016
ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.