Revelation 4:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಪ್ಪತ್ತನಾಲ್ಕು ಮಂದಿ ಹಿರಿಯರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಮೊಣಕಾಲೂರಿ ನಮಸ್ಕರಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವ ಆತನನ್ನು ಆರಾಧಿಸುತ್ತಾ ಇಂತೆಂದರು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.
Kannada BSI Bible 2016
ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಇಪ್ಪತ್ತುನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಾತನ ಪಾದಕ್ಕೆ ಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ -
Kannada Bible (KNCL) BSI 2016
ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ,