Revelation 4:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಿಂಹಾಸನದ ಮೇಲೆ ಕುಳಿತಿದ್ದಾತನು ಅಮೂಲ್ಯವಾದ ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಬಣ್ಣದ ಕಾಮನಬಿಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು.
Kannada BSI Bible 2016
ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂತಿದ್ದವನು ಕಣ್ಣಿಗೆ ಸೂರ್ಯಕಾಂತ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲು ಪಚ್ಚೆಯಂತೆ ತೋರುತ್ತಿದ್ದ ಮುಗಿಲುಬಿಲ್ಲು ಇತ್ತು.
Kannada Bible (KNCL) BSI 2016
ಅವರ ಮುಖ ಸೂರ್ಯಕಾಂತ ಮತ್ತು ಪದ್ಮರಾಗ ಹರಳುಗಳಂತೆ ಹೊಳೆಯುತ್ತಿತ್ತು. ಸಿಂಹಾಸನದ ಸುತ್ತಲೂ ಮರಕತದಂತೆ ಹೊಳೆಯುವ ಮುಗಿಲುಬಿಲ್ಲೊಂದು ಹೊಳೆಯುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಸೀನರಾದವರು ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದರು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆಬಿಲ್ಲು ಹೊಳೆಯುತ್ತಿತ್ತು.