Revelation 4:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಿಂಹಾಸನದಿಂದ ಸಿಡಿಲಿನ ಆರ್ಭಟವೂ ಗುಡುಗಿನ ಧ್ವನಿಯೂ ಬರುತ್ತಿತ್ತು. ಆ ಸಿಂಹಾಸನದ ಮುಂದೆ ಏಳು ದೀಪಗಳು ಬೆಳಗುತ್ತಿದ್ದವು. ಈ ದೀಪಗಳು ದೇವರ ಏಳು ಆತ್ಮಗಳಾಗಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.
Kannada BSI Bible 2016
ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಂಹಾಸನದೊಳಗಿಂದ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಹೊರಡುತ್ತವೆ. ಅದರ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.
Kannada Bible (KNCL) BSI 2016
ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರಹೊಮ್ಮುತ್ತಿದ್ದವು. ಆ ಸಿಂಹಾಸನದ ಮುಂದೆ ದೇವರ ಸಪ್ತ ಆತ್ಮಗಳನ್ನು ಸೂಚಿಸುವ ಸಪ್ತದೀಪಗಳು ಬೆಳಗುತ್ತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿಂಹಾಸನದೊಳಗಿಂದ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಹರಡಿದವು. ಸಿಂಹಾಸನದ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಬೆಳಗುತ್ತಿದ್ದವು.