Revelation 4:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಜೀವಿಗಳು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಪ್ರಭಾವ, ಗೌರವ ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಯುಗಯುಗಾಂತರಗಳಲ್ಲಿಯೂ ಜೀವಿಸುವವನು ಆತನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,
Kannada BSI Bible 2016
ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕೂತಿರುವಾತನಿಗೆ ಆ ನಾಲ್ಕು ಜೀವಿಗಳು ಪ್ರಭಾವಮಾನ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವಾಗ್ಗೆ
Kannada Bible (KNCL) BSI 2016
ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುಗಯುಗಾಂತರಗಳಲ್ಲಿಯೂ ಜೀವಿಸುವವರಾಗಿ, ಸಿಂಹಾಸನದ ಮೇಲೆ ಆಸೀನರಾದವರಿಗೆ ಆ ನಾಲ್ಕು ಜೀವಿಗಳು ಮಹಿಮೆ, ಮಾನ, ಕೃತಜ್ಞತಾ ಸ್ತುತಿಗಳನ್ನು ಸಲ್ಲಿಸುವಾಗ,