Revelation 5:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಿಂಹಾಸನದ ಮೇಲೆ ಕುಳಿತಿರುವಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ನೋಡಿದೆನು. ಅದರ ಎರಡು ಕಡೆಗಳಲ್ಲಿಯೂ ಬರಹವಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
Kannada BSI Bible 2016
ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು; ಅದರ ಎರಡು ಪಕ್ಕೆಗಳಲ್ಲಿಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
Kannada Bible (KNCL) BSI 2016
ನಾನು ಈ ದೃಶ್ಯವನ್ನು ಸಹ ಕಂಡೆ: ಸಿಂಹಾಸನದಲ್ಲಿ ಆಸೀನರಾಗಿರುವವರ ಬಲಗೈಯಲ್ಲಿ ಒಂದು ಸುರುಳಿ ಇತ್ತು. ಅದರ ಒಳಭಾಗದಲ್ಲೂ ಹೊರಭಾಗದಲ್ಲೂ ಬರೆಯಲಾಗಿತ್ತು. ಅದನ್ನು ಏಳು ಮುದ್ರೆಗಳಿಂದ ಮುದ್ರಿಸಲಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.