Revelation 5:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ನಾನು ನೋಡಿದಾಗ, ಅನೇಕ ದೇವದೂತರ ಧ್ವನಿಗಳನ್ನು ಕೇಳಿದೆನು. ಈ ದೇವದೂತರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸುತ್ತಲೂ ಇದ್ದರು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನು ಕೋಟಿಯಾಗಿಯೂ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.
Kannada BSI Bible 2016
ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಸಿಂಹಾಸನವು ಜೀವಿಗಳು ಹಿರಿಯರು ಇವರ ಸುತ್ತಲು ಬಹು ಮಂದಿ ದೇವದೂತರನ್ನು ಕಂಡೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
Kannada Bible (KNCL) BSI 2016
ಅನಂತರ ಅವರ ಸಿಂಹಾಸನದ, ನಾಲ್ಕು ಜೀವಿಗಳ ಹಾಗೂ ಸಭಾಪ್ರಮುಖರ ಸುತ್ತಲೂ ನಿಂತಿದ್ದ ಬಹುಮಂದಿ ದೇವದೂತರ ಸ್ವರವನ್ನು ಕೇಳಿಸಿಕೊಂಡೆ. ಅವರ ಸಂಖ್ಯೆ ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾನು ನೋಡಲಾಗಿ, ಸಿಂಹಾಸನದ ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.