Revelation 5:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ದೇವದೂತರು ಗಟ್ಟಿಯಾದ ಧ್ವನಿಯಿಂದ ಇಂತೆಂದರು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.
Kannada BSI Bible 2016
ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಸ್ವರವು ನನಗೆ ಕೇಳಿಸಿತು; ಅವರು ಮಹಾ ಶಬ್ದದಿಂದ - ವಧಿತನಾದ ಕುರಿಯಾದಾತನು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನ ಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಹೇಳಿದರು.
Kannada Bible (KNCL) BSI 2016
ಅವರೆಲ್ಲರೂ ಉಚ್ಚಕಂಠದಿಂದ: “ವಧಿತ ಕುರಿಮರಿಯಾದಾತನು ಶಕ್ತಿಯನು, ಸಿರಿತನವನು ಗೌರವವನು, ಘನಮಾನವನು ಸ್ತುತಿಯನು, ಸುಜ್ಞಾನವನು ಹೊಂದಲು ಯೋಗ್ಯನು,” ಎಂದು ಹಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು, ಮಹಾಧ್ವನಿಯಿಂದ: “ವಧಿತರಾದ ಕುರಿಮರಿ ಆಗಿರುವವರು ಶಕ್ತಿ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಗೌರವ, ಮಹಿಮೆ, ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯರು!” ಎಂದು ಹೇಳಿದರು.