Revelation 5:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ಆಕಾಶದಲ್ಲಿಯೂ ಭೂಮಿಯಲ್ಲಿಯೂ ಭೂಮಿಯ ಕೆಳಭಾಗದಲ್ಲೂ ಸಮುದ್ರದಲ್ಲೂ ಇರುವ ಪ್ರತಿಯೊಂದು ಜೀವಿಗಳು ಹೀಗೆ ಹೇಳುವುದನ್ನು ಕೇಳಿದೆನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು.
Kannada BSI Bible 2016
ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆಕಾಶದಲ್ಲಿಯೂ ಭೂವಿುಯ ಮೇಲೆಯೂ ಭೂವಿುಯ ಕೆಳಗೆಯೂ ಸಮುದ್ರದ ಮೇಲೆಯೂ ಇರುವ ಎಲ್ಲಾ ಸೃಷ್ಟಿಗಳು ಅಂದರೆ ಭೂಮ್ಯಾಕಾಶಸಮುದ್ರಗಳೊಳಗೆ ಇರುವದೆಲ್ಲವೂ - ಸಿಂಹಾಸನಾಸೀನನಿಗೂ ಯಜ್ಞದ ಕುರಿಯಾದಾತನಿಗೂ ಸ್ತೋತ್ರ ಮಾನ ಪ್ರಭಾವ ಆಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ಕೇಳಿದೆನು.
Kannada Bible (KNCL) BSI 2016
ಇದಲ್ಲದೆ, ಸ್ವರ್ಗ, ಭೂಮಿ, ಪಾತಾಳಗಳಲ್ಲೂ ಸಮುದ್ರದಲ್ಲೂ ಇರುವ ಸಮಸ್ತ ಸೃಷ್ಟಿಗಳು ಹೀಗೆ ಹಾಡುವುದನ್ನು ಕೇಳಿಸಿಕೊಂಡೆ: “ಸಿಂಹಾಸನದಲ್ಲಿ ಕುಳಿತವನಿಗೆ, ಯಜ್ಞಕುರಿಮರಿಯಾದಾತನಿಗೆ ಸಲ್ಲಲಿ ಯುಗಯುಗಾಂತರಕ್ಕೆ ಘನಮಾನ, ಗೌರವ, ಪರಾಕ್ರಮ, ಮತ್ತು ಮಹಿಮೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವವರಿಗೂ ಕುರಿಮರಿ ಆಗಿರುವವರಿಗೂ ಸ್ತೋತ್ರ, ಗೌರವ, ಮಹಿಮೆ, ಶಕ್ತಿ, ಯುಗಯುಗಾಂತರಗಳಲ್ಲಿಯೂ ಇರಲಿ!”