Revelation 5:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಲಿಷ್ಠನಾದ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ಈ ಸುರುಳಿಯ ಮುದ್ರೆಗಳನ್ನು ತೆಗೆಯುವುದಕ್ಕೆ ಯೋಗ್ಯನಾದವನು ಯಾರು?” ಎಂದು ಪ್ರಕಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.
Kannada BSI Bible 2016
ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು - ಈ ಸುರುಳಿಯನ್ನು ಬಿಚ್ಚುವದಕ್ಕೂ ಇದರ ಮುದ್ರೆಗಳನ್ನು ಒಡೆಯುವದಕ್ಕೂ ಯಾವನು ಯೋಗ್ಯನು ಎಂದು ಮಹಾ ಶಬ್ದದಿಂದ ಸಾರುವದನ್ನು ಕಂಡೆನು.
Kannada Bible (KNCL) BSI 2016
ಬಲಿಷ್ಠ ದೇವದೂತನೊಬ್ಬನು ಮಹಾಶಬ್ದದಿಂದ, “ಈ ಮುದ್ರೆಗಳನ್ನು ಒಡೆದು ಸುರುಳಿಯನ್ನು ಬಿಚ್ಚಲು ಯೋಗ್ಯನು ಯಾರು?” ಎಂದು ಪ್ರಕಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು, “ಈ ಸುರುಳಿಯ ಮುದ್ರೆಗಳನ್ನು ಬರೆಯುವುದಕ್ಕೂ ಅದನ್ನು ಬಿಚ್ಚುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಧ್ವನಿಯಿಂದ ಕೂಗುವುದನ್ನು ಕಂಡೆನು.