Revelation 5:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಆ ಕುರಿಮರಿಯ ಸುತ್ತಲೂ ಇದ್ದರು. ಆ ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಈ ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.
Kannada BSI Bible 2016
ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿ ಕೊಯ್ಯಲ್ಪಟ್ಟದ್ದಾಗಿ ನಿಂತಿರುವದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಏನಂದರೆ ಭೂವಿುಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳು.
Kannada Bible (KNCL) BSI 2016
ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆ. ಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು. ಆ ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು.