Revelation 5:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.
Kannada BSI Bible 2016
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;
Kannada Bible (KNCL) BSI 2016
ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.