Revelation 6:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಕುರಿಮರಿಯು ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ಗಮನಿಸಿದೆನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತೆ ಮಾತನಾಡುವುದನ್ನು ನಾನು ಕೇಳಿದೆನು. ಅದು “ಬಾ!” ಎಂದು ಹೇಳಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕುರಿಮರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತಿದ್ದ ಸ್ವರದಿಂದ “ಬಾ!” ಎಂದು ಹೇಳುವುದನ್ನು ಕೇಳಿದೆನು.
Kannada BSI Bible 2016
ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಜ್ಞದ ಕುರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು. ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು - ಬಾ ಎಂದು ಗುಡುಗಿನಂತಿದ್ದ ಸ್ವರದಿಂದ ಹೇಳುವದನ್ನು ಕೇಳಿದನು.
Kannada Bible (KNCL) BSI 2016
ಇದನ್ನೂ ನಾನು ಕಂಡೆ: ಯಜ್ಞದ ಕುರಿಮರಿಯಾದಾತನು ಏಳು ಮುದ್ರೆಗಳಲ್ಲಿ ಒಂದನ್ನು ಒಡೆದನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಗುಡುಗಿನಂತಿದ್ದ ಸ್ವರದಿಂದ, “ಇಲ್ಲಿ ಬಾ,” ಎಂದು ಕರೆಯುವುದನ್ನು ನಾನು ಕೇಳಿಸಿಕೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳು ಮುದ್ರೆಗಳಲ್ಲಿ ಒಂದನ್ನು ಯಜ್ಞದ ಕುರಿಮರಿ ಆಗಿರುವವರು ತೆರೆಯುವುದನ್ನು ನಾನು ಕಂಡೆನು. ಆ ಜೀವಿಗಳಲ್ಲೊಂದು ಗುಡುಗಿನಂತಿದ್ದ ಶಬ್ದದಲ್ಲಿ, “ಬಾ!” ಎಂದು ಹೇಳುವುದನ್ನು ಕೇಳಿದೆನು.