Revelation 6:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಆತ್ಮಗಳಲ್ಲಿ ಪ್ರತಿಯೊಂದಕ್ಕೂ ಒಂದೊಂದು ಬಿಳಿ ನಿಲುವಂಗಿಯನ್ನು ಕೊಡಲಾಯಿತು. ಇನ್ನೂ ಸ್ವಲ್ಪಕಾಲ ಕಾಯುವಂತೆ ಅವುಗಳಿಗೆ ತಿಳಿಸಲಾಯಿತು. ಅವರ ಸಹೋದರರಲ್ಲಿ ಕೆಲವರು ಇನ್ನೂ ಕ್ರಿಸ್ತನ ಸೇವೆಯಲ್ಲಿದ್ದಾರೆ. ಅವರೂ ಕೊಲ್ಲಲ್ಪಡಬೇಕು. ಈ ಕೊಲೆಗಳೆಲ್ಲಾ ಮುಗಿಯುವ ತನಕ ಕಾಯಬೇಕೆಂದು ಆ ಆತ್ಮಗಳಿಗೆ ಹೇಳಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಬಿಳೀ ನಿಲುವಂಗಿಯು ಕೊಡಲ್ಪಟ್ಟಿತು ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು.
Kannada BSI Bible 2016
ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಒಬ್ಬೊಬ್ಬನಿಗೆ ಒಂದೊಂದು ಬಿಳಿ ನಿಲುವಂಗಿಯು ಕೊಡಲ್ಪಟ್ಟಿತು. ಇದಲ್ಲದೆ - ನಿಮ್ಮ ಹಾಗೆ ಕೊಲೆಯಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆದಾಸರ ಸಂಖ್ಯೆಯೂ ಪೂರ್ಣವಾಗುವ ತನಕ ಇನ್ನೂ ಸ್ವಲ್ಪ ಕಾಲ ವಿಶ್ರವಿುಸಿಕೊಂಡಿರಬೇಕೆಂದು ಅವರಿಗೆ ಉತ್ತರವಾಯಿತು.
Kannada Bible (KNCL) BSI 2016
ಅವರಲ್ಲಿ ಪ್ರತಿಯೊಬ್ಬನಿಗೂ ಬಿಳಿಯ ನಿಲುವಂಗಿಯನ್ನು ಕೊಡಲಾಗಿತ್ತು. ಅಲ್ಲದೆ ಅವರಿಗೆ, “ಇನ್ನು ತುಸುಕಾಲ ಕಾದುಕೊಂಡಿರಿ, ನಿಮ್ಮ ಹಾಗೆಯೇ ಹತರಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ಜೊತೆಸೇವಕರ ಪಟ್ಟಿಯು ಭರ್ತಿಯಾಗುವ ತನಕ ವಿಶ್ರಮಿಸಿ,” ಎಂದು ತಿಳಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಬಿಳೀ ನಿಲುವಂಗಿಯು ಕೊಡಲಾಗಿತ್ತು. ಇನ್ನು ಸ್ವಲ್ಪಕಾಲ ಅವರಂತೆಯೇ ವಧಿಸಲಾಗಬೇಕಾಗಿರುವ ಅವರ ಜೊತೆ ಸೇವಕರ ಮತ್ತು ಸಹೋದರರ ಸಂಖ್ಯೆ ಪೂರ್ಣಗೊಳ್ಳುವ ತನಕ ಕಾದಿರಬೇಕೆಂದು ಅವರಿಗೆ ಹೇಳಲಾಯಿತು.