Revelation 6:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಕುರಿಮರಿಯು ಆರನೆಯ ಮುದ್ರೆಯನ್ನು ತೆರೆಯುವುದನ್ನು ನಾನು ನೋಡುತ್ತಲೇ ಇದ್ದೆನು. ಆಗ ಮಹಾಭೂಕಂಪವಾಯಿತು. ಸೂರ್ಯನು ಕಪ್ಪು ಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.
Kannada BSI Bible 2016
ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಆರನೆಯ ಮುದ್ರೆ ಒಡೆಯುವದನ್ನು ಕಂಡೆನು. ಒಡೆದಾಗ ಮಹಾಭೂಕಂಪ ಉಂಟಾಯಿತು; ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು;
Kannada Bible (KNCL) BSI 2016
ಆ ಯಜ್ಞದ ಕುರಿಮರಿ ಆರನೆಯ ಮುದ್ರೆಯನ್ನು ಒಡೆದಾಗ, ದೊಡ್ಡ ಭೂಕಂಪವಾಯಿತು. ಸೂರ್ಯನು ಕರಿಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುರಿಮರಿ ಆಗಿರುವವರು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾ ಭೂಕಂಪವಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.