Revelation 6:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕಾಶದಲ್ಲಿದ್ದ ನಕ್ಷತ್ರಗಳು, ಬಿರುಗಾಳಿ ಬೀಸಿದಾಗ ಅಂಜೂರದ ಹಣ್ಣುಗಳು ಮರದಿಂದ ಭೂಮಿಯ ಮೇಲೆ ಉದುರುವಂತೆ ಉದುರಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು.
Kannada BSI Bible 2016
ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೂರ್ಣಚಂದ್ರನು ರಕ್ತದಂತಾದನು; ಅತ್ತೀಮರವು ಬಿರುಗಾಳಿಯಿಂದ ಅಲ್ಲಾಡಿಸಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂವಿುಗೆ ಬಿದ್ದವು.
Kannada Bible (KNCL) BSI 2016
ಬಿರುಗಾಳಿಯಿಂದ ಅಂಜೂರ ಮರದ ಕಾಯಿಗಳು ಉದುರಿಬೀಳುವಂತೆ ನಕ್ಷತ್ರಗಳು ಆಕಾಶದಿಂದ ಭೂಮಿಗೆ ಬಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿರುಗಾಳಿಯಿಂದ ಆಕಾಶದ ನಕ್ಷತ್ರಗಳು ಅಂಜೂರದ ಕಾಯಿಗಳಂತೆ ಭೂಮಿಗೆ ಬಿದ್ದವು.