Revelation 6:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜನರು ಬೆಟ್ಟಗಳಿಗೆ ಮತ್ತು ಬಂಡೆಗಳಿಗೆ, “ನಮ್ಮ ಮೇಲೆ ಬೀಳಿರಿ. ಸಿಂಹಾಸನದ ಮೇಲೆ ಕುಳಿತಿರುವಾತನ ದೃಷ್ಟಿಯಿಂದ ನಮ್ಮನ್ನು ಮರೆಮಾಡಿ; ಕುರಿಮರಿಯಾದಾತನ ಕೋಪದಿಂದ ನಮ್ಮನ್ನು ಮರೆಮಾಡಿ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.
Kannada BSI Bible 2016
ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಟ್ಟಗಳಿಗೂ ಬಂಡೆಗಳಿಗೂ - ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿರುವಾತನ ಮುಖಕ್ಕೂ ಯಜ್ಞದ ಕುರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;
Kannada Bible (KNCL) BSI 2016
ಅವರು ಆ ಬೆಟ್ಟಗಳನ್ನೂ ಬಂಡೆಗಳನ್ನೂ ಉದ್ದೇಶಿಸಿ, “ನಮ್ಮ ಮೇಲೆ ಬೀಳಿ; ಸಿಂಹಾಸನದಲ್ಲಿ ಆಸೀನರಾಗಿರುವವರ ಸಮ್ಮುಖದಿಂದಲೂ ಯಜ್ಞದ ಕುರಿಮರಿಯಾದಾತನ ಕೋಪಾಗ್ನಿಯಿಂದಲೂ ನಮ್ಮನ್ನು ಮರೆಮಾಡಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಟ್ಟಗುಡ್ಡಗಳಿಗೆ, “ನಮ್ಮ ಮೇಲೆ ಬಿದ್ದು ಸಿಂಹಾಸನದ ಮೇಲೆ ಕುಳಿತಿರುವವನ ಮುಖದಿಂದ ಮತ್ತು ಕುರಿಮರಿ ಆಗಿರುವವರ ಕೋಪಾಗ್ನಿಯಿಂದ ನಮ್ಮನ್ನು ಮರೆಮಾಡಿರಿ.