Revelation 6:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಕುರಿಮರಿಯು ಮೂರನೆಯ ಮುದ್ರೆಯನ್ನು ತೆಗೆಯಿತು. ಆಗ ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ನಾನು ಕೇಳಿದೆನು. ನಾನು ನೋಡಿದಾಗ, ನನ್ನ ಮುಂದೆ ಒಂದು ಕಪ್ಪು ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲಿದ್ದ ಸವಾರನು ತನ್ನ ಕೈಯಲ್ಲಿ ಎರಡು ತಕ್ಕಡಿಗಳನ್ನು ಹಿಡಿದಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.
Kannada BSI Bible 2016
ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು - ಬಾ ಅನ್ನುವದನ್ನು ಕೇಳಿದೆನು. ಆಗ ಇಗೋ, ಕಪ್ಪು ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು.
Kannada Bible (KNCL) BSI 2016
ಆ ಯಜ್ಞದ ಕುರಿಮರಿ ಮೂರನೆಯ ಮುದ್ರೆಯನ್ನು ಒಡೆದಾಗ, ಮೂರನೆಯ ಜೀವಿಯು, “ಇಲ್ಲಿ ಬಾ,” ಎಂದು ಕರೆಯುವುದನ್ನು ಕೇಳಿಸಿಕೊಂಡೆ. ಆಗ ಕಪ್ಪು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುರಿಮರಿ ಆಗಿರುವವರು ಮೂರನೆಯ ಮುದ್ರೆಯನ್ನು ತೆರೆದಾಗ, ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ಕೇಳಿದೆನು. ನಾನು ನೋಡಲು, ಕಪ್ಪಾದ ಒಂದು ಕುದುರೆಯನ್ನು ಕಂಡೆನು. ಅದರ ಸವಾರನು ತನ್ನ ಕೈಯಲ್ಲಿ ಒಂದು ತಕ್ಕಡಿಯನ್ನು ಹಿಡಿದಿದ್ದನು.