Revelation 7:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ಮೂಲೆಗಳಲ್ಲಿ ನಿಂತಿರುವುದನ್ನು ನಾನು ನೋಡಿದೆನು. ಗಾಳಿಯು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಮರದ ಮೇಲಾಗಲಿ ಬೀಸದಂತೆ ಅವರು ಭೂಮಿಯ ನಾಲ್ಕು ದಿಕ್ಕುಗಳ ಗಾಳಿಯನ್ನು ತಡೆಹಿಡಿದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.
Kannada BSI Bible 2016
ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂವಿುಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂವಿುಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿಬೀಸದಂತೆ ಭೂವಿುಯ ಚತುರ್ದಿಕ್ಕುಗಳ ಗಾಳಿಗಳನ್ನು ಹಿಡಿದಿರುವದನ್ನು ಕಂಡೆನು.
Kannada Bible (KNCL) BSI 2016
ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ; ನಾಲ್ಕುಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿದ್ದರು. ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ, ಮರಗಳ ಮೇಲಾಗಲಿ ಗಾಳಿಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ಅವರು ತಡೆಹಿಡಿದಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದನಂತರ ನಾಲ್ಕು ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿರುವುದನ್ನು ಕಂಡೆನು. ಅವರು ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ತಡೆಹಿಡಿದಿದ್ದರು.