Revelation 7:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಗಟ್ಟಿಯಾದ ಧ್ವನಿಯಲ್ಲಿ, “ಸಿಂಹಾಸನದ ಮೇಲೆ ಕುಳಿತುಕೊಳ್ಳುವ ನಮ್ಮ ಪ್ರಭುವಿಗೆ ಮತ್ತು ಕುರಿಮರಿಯಾದಾತನಿಗೆ ಜಯವು ಲಭಿಸಿತು” ಎಂದು ಕೂಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು.
Kannada BSI Bible 2016
ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ಸಿಂಹಾಸನಾಸೀನನಾಗಿರುವ ನಮ್ಮ ದೇವರಿಗೂ ಯಜ್ಞದ ಕುರಿಯಾದಾತನಿಗೂ ನಮಗೆ ರಕ್ಷಣೆಯುಂಟಾದದ್ದಕ್ಕಾಗಿ ಸ್ತೋತ್ರ ಎಂದು ಮಹಾ ಶಬ್ದದಿಂದ ಕೂಗಿದರು.
Kannada Bible (KNCL) BSI 2016
ಅವರು ಗಟ್ಟಿಯಾದ ಧ್ವನಿಯಿಂದ: “ಸಿಂಹಾಸನಾರೂಢರಾದ ದೇವರಿಂದ, ಬಲಿಯರ್ಪಿತರಾದ ಯಜ್ಞದ ಕುರಿಮರಿಯಿಂದ ಲಭಿಸುತ್ತದೆಮಗೆ ಜೀವೋದ್ಧಾರ,” ಎಂದು ಹಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮಹಾಧ್ವನಿಯಿಂದ ಹೀಗೆ ಕೂಗಿದರು: “ಸಿಂಹಾಸನದಲ್ಲಿ ಕೂತಿರುವ ನಮ್ಮ ದೇವರಿಗೂ, ಕುರಿಮರಿ ಆಗಿರುವವರಿಗೂ, ರಕ್ಷಣೆಯು ಸೇರತಕ್ಕದ್ದಾಗಿದೆ.”