Revelation 7:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿರಿಯರು ಅಲ್ಲಿದ್ದರು ಮತ್ತು ನಾಲ್ಕು ಜೀವಿಗಳು ಅಲ್ಲಿದ್ದವು. ಅವರ ಸುತ್ತಲೂ ಮತ್ತು ಸಿಂಹಾಸನದ ಸುತ್ತಲೂ ದೇವದೂತರೆಲ್ಲಾ ನಿಂತಿದ್ದರು. ದೇವದೂತರು ಸಿಂಹಾಸನದ ಮುಂದೆ ಮೊಣಕಾಲೂರಿ ದೇವರನ್ನು ಆರಾಧಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು,
Kannada BSI Bible 2016
ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.--
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನವು ಹಿರಿಯರು ನಾಲ್ಕು ಜೀವಿಗಳು ಇವುಗಳ ಸುತ್ತಲು ನಿಂತುಕೊಂಡಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು -
Kannada Bible (KNCL) BSI 2016
ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರಮಾಡಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿಂಹಾಸನ, ಹಿರಿಯರು ಮತ್ತು ನಾಲ್ಕು ಜೀವಿಗಳ ಸುತ್ತಲೂ ದೇವದೂತರು ನಿಂತಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು ದೇವರನ್ನು ಆರಾಧಿಸಿ,