Revelation 7:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು, “ಆಮೆನ್! ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸುತ್ತಿಯೂ ಗೌರವವೂ ಅಧಿಕಾರವೂ ಮತ್ತು ಬಲವೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್!” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
Kannada BSI Bible 2016
ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೆನ್. ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಶಕ್ತಿಯೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
Kannada Bible (KNCL) BSI 2016
“ಆಮೆನ್, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ, ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಮೆನ್! ಸ್ತೋತ್ರ, ಮಹಿಮೆ, ಜ್ಞಾನ, ಕೃತಜ್ಞತೆ, ಗೌರವ, ಶಕ್ತಿ, ಬಲ ನಮ್ಮ ದೇವರಿಗೆ ಯುಗಯುಗಾಂತರಕ್ಕೂ ಉಂಟಾಗಲಿ. ಆಮೆನ್!” ಎಂದು ಹೇಳುತ್ತಿದ್ದರು.