Revelation 7:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಹಿರಿಯರಲ್ಲೊಬ್ಬನು, “ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡಿರುವ ಈ ಜನರು ಯಾರು! ಅವರು ಎಲ್ಲಿಂದ ಬಂದವರು?” ಎಂದು ನನ್ನನ್ನು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು.
Kannada BSI Bible 2016
ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು - ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು ಎಂದು ನನ್ನನ್ನು ಕೇಳಲು - ಅಯ್ಯಾ, ನೀನೇ ಬಲ್ಲೆ ಅಂದೆನು.
Kannada Bible (KNCL) BSI 2016
ಸಭಾಪ್ರಮುಖರಲ್ಲಿ ಒಬ್ಬನು, “ಶ್ವೇತಾಂಬರರಾದ ಇವರೆಲ್ಲರೂ ಯಾರು? ಎಲ್ಲಿಂದ ಬಂದರು?” ಎಂದು ನನ್ನನ್ನು ಪ್ರಶ್ನಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಹಿರಿಯರಲ್ಲೊಬ್ಬನು ನನ್ನನ್ನು, “ಈ ಬಿಳಿ ನಿಲುವಂಗಿಯನ್ನು ತೊಟ್ಟ ಇವರು ಯಾರು? ಎಲ್ಲಿಂದ ಬಂದವರು?” ಎಂದು ಕೇಳಿದನು.