Revelation 7:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.
Kannada BSI Bible 2016
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.
Kannada Bible (KNCL) BSI 2016
ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು: “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”