Revelation 7:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಈ ಜನರು ಈಗ ದೇವರ ಸಿಂಹಾಸನದ ಮುಂದೆ ಇದ್ದಾರೆ. ಅವರು ದೇವರನ್ನು ಆತನ ಆಲಯದಲ್ಲಿ ಹಗಲಿರುಳು ಆರಾಧಿಸುತ್ತಾರೆ. ಸಿಂಹಾಸನದ ಮೇಲೆ ಕುಳಿತಿರುವಾತನು ಅವರನ್ನು ಸಂರಕ್ಷಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.
Kannada BSI Bible 2016
ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆಮಾಡುತ್ತಾ ಇದ್ದಾರೆ; ಸಿಂಹಾಸನದಲ್ಲಿ ಕೂತಿರುವಾತನು ಗುಡಾರದಂತೆ ಅವರನ್ನು ಆವರಿಸುವನು.
Kannada Bible (KNCL) BSI 2016
‘ಇರುವರು ದೇವರ ಸಿಂಹಾಸನದ ಸಮ್ಮುಖದಲ್ಲೇ ಆರಾಧಿಪರಾತನನು ಹಗಲಿರುಳು ದೇವಾಲಯದಲ್ಲೇ ಸಂರಕ್ಷಿಪನಾತನು ಅವರನ್ನು ಗುಡಾರದಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, “ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು, ದೇವರ ಆಲಯದಲ್ಲಿ ಹಗಲಿರುಳೂ ದೇವರನ್ನು ಸೇವೆಮಾಡುವರು. ಸಿಂಹಾಸನದ ಮೇಲೆ ಕೂತಿದ್ದವರು ಅವರನ್ನು ಆವರಿಸಿ ಸಂರಕ್ಷಿಸಿದರು.