Revelation 7:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಜನರಿಗೆ ಮತ್ತೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಸೂರ್ಯನ ತಾಪವಾಗಲಿ ಇರುವುದಿಲ್ಲ. ಅವರನ್ನು ಯಾವ ತಾಪವೂ ಸುಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ.
Kannada BSI Bible 2016
ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಮೇಲೆ ಅವರಿಗೆ ಹಸಿವೆ ಇಲ್ಲ, ಬಾಯಾರಿಕೆ ಇಲ್ಲ; ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ;
Kannada Bible (KNCL) BSI 2016
ಇನ್ನಿರದು ಅವರಿಗೆ ಹಸಿವು ಬಾಯಾರಿಕೆ ತಟ್ಟದವರನು ಬಿಸಿಲಿನ ತಾಪ, ಸೂರ್ಯನ ಕೋಪ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಇವರಿಗೆ ಇನ್ನೆಂದಿಗೂ ಹಸಿವೆಯಾಗಲಿ; ಬಾಯಾರಿಕೆಯಾಗಲಿ ಆಗುವುದಿಲ್ಲ. ಇದಲ್ಲದೆ ಸೂರ್ಯನ ಬಿಸಿಲಾದರೂ,’ ಯಾವ ಝಳವಾದರೂ ಇವರಿಗೆ ತಟ್ಟುವುದಿಲ್ಲ.