Revelation 7:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.
Kannada BSI Bible 2016
ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
Kannada Bible (KNCL) BSI 2016
ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’ ” ಎಂದು ಹೇಳಿದನು.