Revelation 7:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಬೇರೊಬ್ಬ ದೇವದೂತನು ಪೂರ್ವದಿಕ್ಕಿನ ಕಡೆಯಿಂದ ಬರುತ್ತಿರುವುದನ್ನು ನಾನು ನೋಡಿದೆನು. ಜೀವಸ್ವರೂಪನಾದ ದೇವರ ಮುದ್ರೆಯು ಈ ದೇವದೂತನ ಬಳಿಯಿತ್ತು. ಈ ದೇವದೂತನು ನಾಲ್ಕುಮಂದಿ ದೇವದೂತರನ್ನು ಗಟ್ಟಿಯಾದ ಧ್ವನಿಯಲ್ಲಿ ಕರೆದನು. ಭೂಮಿಗೆ ಮತ್ತು ಸಮುದ್ರಕ್ಕೆ ತೊಂದರೆ ಮಾಡುವುದಕ್ಕೆ ಅಧಿಕಾರವನ್ನು ದೇವರು ಈ ನಾಲ್ವರು ದೇವದೂತರಿಗೆ ನೀಡಿದ್ದನು. ಆ ದೇವದೂತನು ಈ ನಾಲ್ವರು ದೇವದೂತರಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ,
Kannada BSI Bible 2016
ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡುಕೊಂಡು ಮೂಡಣ ದಿಕ್ಕಿನಿಂದ ಏರಿಬರುವದನ್ನು ಕಂಡೆನು. ಅವನು ಭೂವಿುಯನ್ನೂ ಸಮುದ್ರವನ್ನೂ ಕೆಡಿಸುವದಕ್ಕೆ ಅಧಿಕಾರಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ -
Kannada Bible (KNCL) BSI 2016
ಆಗ ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮತ್ತೊಬ್ಬ ದೂತನು, ಜೀವಸ್ವರೂಪರಾದ ದೇವರ ಮುದ್ರೆಯನ್ನು ಹಿಡಿದು ಪೂರ್ವದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಭೂಮಿ ಮತ್ತು ಸಮುದ್ರವನ್ನು ಬಾಧಿಸುವ ಶಕ್ತಿ ಹೊಂದಿದ ನಾಲ್ಕು ದೂತರಿಗೆ ಅವನು ಮಹಾಶಬ್ದದಿಂದ,