Revelation 7:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಮ್ಮ ದೇವರ ಸೇವೆಮಾಡುವ ಜನರ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಗಾಗಲಿ ಸಮುದ್ರಕ್ಕಾಗಲಿ ಮರಗಳಿಗಾಗಲಿ ತೊಂದರೆಯನ್ನು ಮಾಡಬೇಡಿ” ಎಂದು ಕೂಗಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
Kannada BSI Bible 2016
ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವತನಕ ಭೂವಿುಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
Kannada Bible (KNCL) BSI 2016
“ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾವು ನಮ್ಮ ದೇವರ ದಾಸರ ಹಣೆಗಳ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ಹಾನಿಪಡಿಸಬೇಡ!” ಎಂದು ಹೇಳಿದನು.