Revelation 7:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ, ಮುದ್ರೆ ಒತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಅವರ ಒಟ್ಟು ಸಂಖ್ಯೆ 1,44,000 ಮಂದಿ. ಅವರು ಇಸ್ರೇಲರ ಹನ್ನೆರಡು ಕುಲಗಳಿಗೆ ಸೇರಿದವರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.
Kannada BSI Bible 2016
ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ನಾನು ಕೇಳಿದೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಒತ್ತಿಸಿಕೊಂಡರು. ಅವರ ಸಂಖ್ಯೆ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ.
Kannada Bible (KNCL) BSI 2016
ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಮಂದಿ. ಅವರ ಬಿಡಿ ಸಂಖ್ಯೆ ಹೀಗಿತ್ತು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮುದ್ರೆ ಹೊಂದಿರುವವರ ಸಂಖ್ಯೆಯು ನನಗೆ ಕೇಳಿಸಿತು. ಇಸ್ರಾಯೇಲಿನ ಎಲ್ಲಾ ಕುಲಗಳಿಂದ ಮುದ್ರೆಹಾಕಿಸಿಕೊಂಡವರು 1,44,000 ಜನರು.