Revelation 8:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೂರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ಕೆಳಗೆ ಬಿತ್ತು. ಆ ನಕ್ಷತ್ರವು ನದಿಗಳಲ್ಲಿ ಮತ್ತು ನೀರಿನ ಬುಗ್ಗೆಗಳಲ್ಲಿ ಮೂರನೆಯ ಒಂದು ಭಾಗದ ಮೇಲೆ ಬಿದ್ದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.
Kannada BSI Bible 2016
ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರನೆಯ ದೇವದೂತನು ತುತೂರಿಯನ್ನೂದಿದಾಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.
Kannada Bible (KNCL) BSI 2016
ಮೂರನೆಯ ದೇವದೂತನು ತುತೂರಿಯನ್ನು ಊದಿದನು. ಪಂಜಿನಂತೆ ಉರಿಯುತ್ತಿದ್ದ ದೊಡ್ಡ ನಕ್ಷತ್ರವೊಂದು ಆಕಾಶದಿಂದ ಕೆಳಕ್ಕೆ ಬಿತ್ತು. ಅದು ನದಿಗಳಲ್ಲಿ ಮೂರನೆಯ ಒಂದು ಭಾಗದ ಮೇಲೂ ನೀರಿನ ಒರತೆಗಳ ಮೇಲೂ ಬಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೀಪದಂತೆ ಉರಿಯುವ ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.