Revelation 8:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ನಕ್ಷತ್ರಕ್ಕೆ “ಕಹಿ ಮರ” ಎಂದು ಹೆಸರು. ನೀರಿನಲ್ಲಿ ಮೂರನೆಯ ಒಂದು ಭಾಗವು ಕಹಿಯಾಯಿತು. ಈ ಕಹಿಯಾದ ನೀರನ್ನು ಕುಡಿದು ಅನೇಕ ಜನರು ಸತ್ತುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನಕ್ಷತ್ರದ ಹೆಸರು ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು.
Kannada BSI Bible 2016
ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನೊಳಗೆ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ಕಹಿಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಅನೇಕರು ಸತ್ತರು.
Kannada Bible (KNCL) BSI 2016
ಆ ನಕ್ಷತ್ರದ ಹೆಸರು ‘ವಿಷಕನ್ಯೆ'. ನೀರಿನಲ್ಲಿ ಮೂರನೆಯ ಒಂದು ಭಾಗ ವಿಷವಾಯಿತು; ಇದರಿಂದಾಗಿ ಅನೇಕರು ನೀರನ್ನು ಕುಡಿದು ಸತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ನಕ್ಷತ್ರದ ಹೆಸರು, ಮಾಚಿಪತ್ರೆ, ಆಗ ಮೂರರಲ್ಲಿ ಒಂದು ಭಾಗವು ಕಹಿಯಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕ ಜನರು ಸತ್ತರು.