Revelation 8:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನೋಡುತ್ತಿದ್ದಂತೆ, ವಾಯುಮಂಡಲದ ಅತಿ ಎತ್ತರದಲ್ಲಿ ಗರುಡ ಪಕ್ಷಿಯೊಂದು ಹಾರಾಡುತ್ತಿರುವುದನ್ನು ಕಂಡೆನು. ಆ ಪಕ್ಷಿಯು ಗಟ್ಟಿಯಾದ ಧ್ವನಿಯಲ್ಲಿ, “ತೊಂದರೆ! ತೊಂದರೆ! ಭೂಮಿಯ ಮೇಲೆ ವಾಸಿಸುವ ಜನರಿಗೆ ತೊಂದರೆ! ಇತರ ಮೂರು ಮಂದಿ ದೇವದೂತರು ತಮ್ಮ ತುತೂರಿಗಳನ್ನು ಊದಿದಾಗ ವಿಪತ್ತುಗಳು ಆರಂಭವಾಗುತ್ತವೆ” ಎಂದು ಕೂಗಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.
Kannada BSI Bible 2016
ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ನಾನು ನೋಡಲಾಗಿ ಇಗೋ, ಒಂದೇ ಗರುಡಪಕ್ಷಿಯು ಆಕಾಶಮಧ್ಯದಲ್ಲಿ ಹಾರಾಡುತ್ತಿತ್ತು. ಅದು - ಅಯ್ಯೋ, ಅಯ್ಯೋ, ಅಯ್ಯೋ, ಊದಬೇಕಾಗಿರುವ ಮೂವರು ದೇವದೂತರ ವಿುಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ ಎಂಥಾ ವಿಪತ್ತುಗಳು ಸಂಭವಿಸುವವು ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
Kannada Bible (KNCL) BSI 2016
ಅನಂತರ ಆಕಾಶಮಧ್ಯದಲ್ಲಿ ಒಂದು ಗರುಡ ಪಕ್ಷಿ ಹಾರಾಡುತ್ತಿರುವುದನ್ನು ನಾನು ಕಂಡೆ. ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು,” ಎಂದು ಗಟ್ಟಿಯಾಗಿ ಕೂಗುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನೋಡಲಾಗಿ, ಆಕಾಶದ ಮಧ್ಯದಲ್ಲಿ ಹಾರುತ್ತಿರುವ ಒಂದು ಗರುಡ ಪಕ್ಷಿ ಮಹಾಧ್ವನಿಯಿಂದ: ಇನ್ನೂ ಊದಲಿರುವ ಮೂವರು ದೂತರ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ, “ಅಯ್ಯೋ! ಅಯ್ಯೋ! ಅಯ್ಯೋ!” ಎಂದಿತು.