Revelation 8:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.
Kannada BSI Bible 2016
ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಮತ್ತೊಬ್ಬ ದೇವದೂತನು ಬಂದು ಯಜ್ಞವೇದಿಯ ಬಳಿಯಲ್ಲಿ ನಿಂತನು; ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
Kannada Bible (KNCL) BSI 2016
ಅನಂತರ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಸಮ್ಮುಖದಲ್ಲಿರುವ ಚಿನ್ನದ ಬಲಿಪೀಠದ ಮೇಲೆ ದೇವಜನರೆಲ್ಲರ ಪ್ರಾರ್ಥನೆಯೊಡನೆ ಸಮರ್ಪಿಸಲು ಅವನಿಗೆ ಬಹಳಷ್ಟು ಧೂಪವನ್ನು ಕೊಡಲಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಿನ್ನದ ಧೂಪಾರತಿಯಿದ್ದ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಸಿಂಹಾಸನದ ಮುಂದಿನ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳೊಂದಿಗೆ ಅರ್ಪಿಸಲು ಅವನಿಗೆ ಬಹಳ ಧೂಪವು ಕೊಡಲಾಗಿತ್ತು.