Revelation 8:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದೇವದೂತನು ಧೂಪವಿದ್ದ ಪಾತ್ರೆಯನ್ನು ಯಜ್ಞವೇದಿಕೆಯ ಬೆಂಕಿಯಿಂದ ತುಂಬಿಸಿ ಅದನ್ನು ಭೂಮಿಯ ಮೇಲೆ ಎಸೆದನು. ಆಗ ಮಿಂಚು ಗುಡುಗುಗಳೂ ಮತ್ತಿತರ ಧ್ವನಿಗಳೂ ಭೂಕಂಪಗಳೂ ಉಂಟಾದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು.
Kannada BSI Bible 2016
ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿದ್ದ ಕೆಂಡಗಳಿಂದ ತುಂಬಿಸಿ ಭೂವಿುಗೆ ಬಿಸಾಡಿದನು. ಆಗ ಗುಡುಗುಗಳೂ ವಾಣಿಗಳೂ ವಿುಂಚುಗಳೂ ಭೂಕಂಪವೂ ಉಂಟಾದವು.
Kannada Bible (KNCL) BSI 2016
ಅನಂತರ ಆ ದೇವದೂತನು ಧೂಪಾರತಿಯನ್ನು ಎತ್ತಿಕೊಂಡು, ಅದನ್ನು ಬಲಿಪೀಠದ ಮೇಲಿದ್ದ ಕೆಂಡಗಳಿಂದ ತುಂಬಿಸಿ, ಭೂಮಿಗೆ ಎಸೆದನು. ಆಗ ಮಿಂಚು, ಗುಡುಗು, ಗರ್ಜನೆಗಳು ಮತ್ತು ಭೂಕಂಪವು ಉಂಟಾದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಬಲಿಪೀಠದ ಬೆಂಕಿಯಿಂದ ಅದನ್ನು ತುಂಬಿಸಿ, ಭೂಮಿಯ ಮೇಲೆ ಎಸೆದನು. ಆಗ ಗುಡುಗುಗಳೂ ಸಪ್ಪಳವೂ ಮಿಂಚುಗಳೂ ಮತ್ತು ಭೂಕಂಪವೂ ಉಂಟಾದವು.