Revelation 8:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ರಕ್ತದಲ್ಲಿ ಕಲಸಿದ್ದ ಆಲಿಕಲ್ಲುಗಳ ಮತ್ತು ಬೆಂಕಿಯ ಮಳೆಯು ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರನೆಯ ಒಂದು ಭಾಗ ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋದವು; ಮತ್ತು ಮರಗಳಲ್ಲಿ ಮೂರನೆಯ ಒಂದು ಭಾಗ ಸುಟ್ಟುಹೋದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.
Kannada BSI Bible 2016
ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲನೆಯ ದೇವದೂತನು ತುತೂರಿಯನ್ನೂದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂವಿುಗೆ ಸುರಿಸಲ್ಪಟ್ಟವು; ಭೂವಿುಯೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.
Kannada Bible (KNCL) BSI 2016
ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಲು, ರಕ್ತದೊಂದಿಗೆ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿದವು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋಯಿತು.