Revelation 9:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಇದ್ದವು; ಜನರಿಗೆ ಐದುತಿಂಗಳ ಕಾಲ ನೋವುಂಟುಮಾಡುವ ಶಕ್ತಿಯು ಅವುಗಳ ಬಾಲಗಳಲ್ಲಿ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು.
Kannada BSI Bible 2016
ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಕೊಂಡಿಗಳೂ ಉಂಟು; ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವದು.
Kannada Bible (KNCL) BSI 2016
ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಅವುಗಳಿಗಿದ್ದವು. ಐದು ತಿಂಗಳವರೆಗೆ ಮಾನವರನ್ನು ಬಾಧಿಸುವ ಶಕ್ತಿ ಆ ಬಾಲಗಳಿಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳಿಗೆ ಚೇಳಿನಂತೆ ಬಾಲವೂ ಕೊಂಡಿಯೂ ಇದ್ದವು. ಅವುಗಳಿಗೆ ಮನುಷ್ಯರನ್ನು ಐದು ತಿಂಗಳುಗಳ ಕಾಲ ತಮ್ಮ ಬಾಲಗಳಿಂದ ಬಾಧಿಸುವ ಸಾಮರ್ಥ್ಯವಿತ್ತು.