Revelation 9:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಿಯತಮತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.
Kannada BSI Bible 2016
ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಧೋಲೋಕದ ಅಧಿಕಾರಿಯಾದ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.
Kannada Bible (KNCL) BSI 2016
ಪಾತಾಳಕೂಪದ ದೂತನೇ ಅವುಗಳನ್ನು ಆಳುವ ಅರಸು. ಅವನಿಗೆ ಹಿಬ್ರಿಯ ಭಾಷೆಯಲ್ಲಿ, ‘ಅಬದ್ದೋನ್’ ಎಂದೂ ಗ್ರೀಕ್ ಭಾಷೆಯಲ್ಲಿ, ‘ಅಪೊಲ್ಲುವೋನ್’ ಎಂದೂ ಹೆಸರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು.