Revelation 9:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೇವರ ಸನ್ನಿಧಿಯಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲಿನ ಕೊಂಬುಗಳಿಂದ ಬರುತ್ತಿರುವ ಧ್ವನಿಯನ್ನು ನಾನು ಕೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ಯಜ್ಞವೇದಿಯ ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು.
Kannada BSI Bible 2016
ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರನೆಯ ದೇವದೂತನು ತುತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಯ ಕೊಂಬುಗಳಿಂದ ಹೊರಟ ಒಂದೇ ಧ್ವನಿಯನ್ನು ಕೇಳಿದೆನು.
Kannada Bible (KNCL) BSI 2016
ಆರನೆಯ ದೇವದೂತನು ತುತೂರಿಯನ್ನು ಊದಿದನು. ದೇವರ ಸಾನ್ನಿಧ್ಯದಲ್ಲಿ ಇರುವ ಚಿನ್ನದ ಬಲಿಪೀಠದ ನಾಲ್ಕು ಮೂಲೆಗಳಿಂದ ಹೊರಟ ಒಂದು ಶಬ್ದ ನನಗೆ ಕೇಳಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರನೆಯ ದೇವದೂತನು ತನ್ನ ತುತೂರಿಯನ್ನು ಊದಲು, ದೇವರ ಮುಂದೆ ಇರುವ ಚಿನ್ನದ ಬಲಿಪೀಠದ ನಾಲ್ಕು ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು.