Revelation 9:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ನಾಲ್ಕು ಮಂದಿ ದೇವದೂತರನ್ನು ಇದೇ ವರ್ಷ, ಇದೇ ತಿಂಗಳು, ಇದೇ ದಿನ, ಇದೇ ತಾಸಿಗಾಗಿ ಸಿದ್ಧಪಡಿಸಲಾಗಿತ್ತು. ಭೂಮಿಯ ಮೇಲಿರುವ ಜನರಲ್ಲಿ ಮೂರನೆಯ ಒಂದು ಭಾಗವನ್ನು ಸಂಹರಿಸಲು ಇವರನ್ನು ಬಿಡುಗಡೆ ಮಾಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು.
Kannada BSI Bible 2016
ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವದಕ್ಕಾಗಿ ಅದೇ ವರುಷ ಅದೇ ತಿಂಗಳು ದಿನ ತಾಸಿಗೆ ಸಿದ್ಧವಾಗಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಟ್ಟರು;
Kannada Bible (KNCL) BSI 2016
ಮಾನವ ಜನಾಂಗದ ಮೂರನೆಯ ಒಂದು ಭಾಗವನ್ನು ಸಂಹರಿಸುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಾಗಿ ನಿಂತಿದ್ದ ಆ ನಾಲ್ಕು ದೇವದೂತರನ್ನು ಬಂಧಮುಕ್ತರನ್ನಾಗಿ ಮಾಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾನವಕುಲದ ಮೂರರಲ್ಲೊಂದು ಭಾಗವನ್ನು ಕೊಲ್ಲುವುದಕ್ಕಾಗಿ ಆ ಗಳಿಗೆ, ದಿನ, ತಿಂಗಳು ಮತ್ತು ವರ್ಷಕ್ಕಾಗಿಯೇ ಸಿದ್ಧವಾಗಿದ್ದ ನಾಲ್ಕು ದೇವದೂತರನ್ನು ಬಿಡುಗಡೆ ಮಾಡಲಾಯಿತು.