Revelation 9:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ದರ್ಶನದಲ್ಲಿ ಕುದುರೆಗಳನ್ನೂ ಕುದುರೆಗಳ ಮೇಲಿದ್ದ ಸವಾರರನ್ನೂ ನೋಡಿದೆನು. ಅವರು ಹೀಗೆ ಕಾಣುತ್ತಿದ್ದರು: ಅವರು ಬೆಂಕಿಯಂತೆ ಕೆಂಪಾದ, ಕಪ್ಪಾದ, ನೀಲಿಯ ಮತ್ತು ಗಂಧಕದಂತೆ ಹಳದಿಯಾದ ಕವಚಗಳನ್ನು ಹೊಂದಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಕಾಣುತ್ತಿದ್ದವು. ಕುದುರೆಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕಗಳು ಬರುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು.
Kannada BSI Bible 2016
ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಂದರೆ - ಸವಾರರ ಕವಚಗಳ ಬಣ್ಣವು ಬೆಂಕಿ ಹೊಗೆ ಗಂಧಕ ಇವುಗಳ ಬಣ್ಣದ ಹಾಗಿತ್ತು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು;
Kannada Bible (KNCL) BSI 2016
ಹೀಗೆ ಕುದುರೆಗಳನ್ನೂ ಅವುಗಳ ಮೇಲೆ ಕುಳಿತ ಸವಾರರನ್ನೂ ನಾನು ದರ್ಶನದಲ್ಲಿ ಕಂಡೆ. ಆ ಸವಾರರು ಬೆಂಕಿಯ, ನೀಲಮಣಿಯ ಹಾಗೂ ಗಂಧಕ ವರ್ಣಗಳ ಕವಚಗಳನ್ನು ಧರಿಸಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಇದ್ದವು. ಅವುಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬರುತ್ತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ದರ್ಶನದಲ್ಲಿ ಕುದುರೆಗಳನ್ನೂ ಸವಾರರನ್ನೂ ಕಂಡೆನು. ಅವರ ಕವಚಗಳು ಬೆಂಕಿಯ ಕೆಂಪು, ನೀಲಮಣಿ ಹಾಗೂ ಹಳದಿ ಬಣ್ಣದಂತೆಯೂ ಇದ್ದವು. ಕುದುರೆಗಳ ತಲೆಗಳು ಸಿಂಹದ ತಲೆಗಳಂತಿದ್ದವು. ಅವುಗಳ ಬಾಯೊಳಗಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬಂದವು.