Revelation 9:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಿಯ ಮೇಲಿನ ಜನರಲ್ಲಿ ಮೂರನೆಯ ಒಂದು ಭಾಗವು ಕುದುರೆಗಳ ಬಾಯಿಂದ ಹೊರಬಂದ ಬೆಂಕಿ, ಹೊಗೆ ಮತ್ತು ಗಂಧಕಗಳ ಉಪದ್ರವಗಳಿಂದ ಕೊಲ್ಲಲ್ಪಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು.
Kannada BSI Bible 2016
ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ಬಾಯಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು. ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರಲ್ಲಿ ಮೂರನೆಯ ಭಾಗವು ಹತವಾಯಿತು.
Kannada Bible (KNCL) BSI 2016
ಅವುಗಳ ಬಾಯಿಂದ ಬರುತ್ತಿದ್ದ ಇವುಗಳು ಮೂರು ವಿಪತ್ತುಗಳಾಗಿದ್ದವು. ಇವುಗಳಿಂದ ಮಾನವಜನಾಂಗದ ಮೂರನೆಯ ಒಂದು ಭಾಗ ಹತವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಬಾಯೊಳಗಿಂದ ಬಂದ ಬೆಂಕಿ ಹೊಗೆ ಮತ್ತು ಗಂಧಕಗಳೆಂಬ ಮೂರು ಉಪದ್ರವಗಳಿಂದ ಮಾನವಕುಲದ ಮೂರರಲ್ಲೊಂದು ಭಾಗದ ಜನರು ಹತರಾದರು.