Revelation 9:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
Kannada BSI Bible 2016
ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ; ಅವರು ದೆವ್ವಗಳ ಪೂಜೆಯನ್ನೂ ಬಂಗಾರ ಬೆಳ್ಳಿ ತಾಮ್ರ ಕಲ್ಲು ಮರ ಇವೇ ಮುಂತಾದವುಗಳಿಂದ ಮಾಡಲ್ಪಟ್ಟು ನೋಡಲಾರದೆ ಕೇಳಲಾರದೆ ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
Kannada Bible (KNCL) BSI 2016
ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.