Revelation 9:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಮಿಯ ಮೇಲಿನ ಹುಲ್ಲಿಗಾಗಲಿ ಸಸ್ಯಕ್ಕಾಗಲಿ ಮರಕ್ಕಾಗಲಿ ಹಾನಿ ಮಾಡದಂತೆ ಆ ಪ್ರಿಯತಮತೆಗಳಿಗೆ ತಿಳಿಸಲಾಯಿತು. ತಮ್ಮ ಹಣೆಗಳ ಮೇಲೆ ದೇವರ ಮುದ್ರೆಯಿಲ್ಲದ ಜನರನ್ನು ಹಿಂಸಿಸಲು ಅವುಗಳಿಗೆ ತಿಳಿಸಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.
Kannada BSI Bible 2016
ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯ ಮೇಲಿರುವ ಹುಲ್ಲನ್ನಾಗಲಿ ಯಾವ ಪಲ್ಯವನ್ನಾಗಲಿ ಮರವನ್ನಾಗಲಿ ಕೆಡಿಸದೆ ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ಕೆಡಿಸಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.
Kannada Bible (KNCL) BSI 2016
ಭೂಮಿಯ ಮೇಲಣ ಹುಲ್ಲಿಗಾಗಲಿ, ಯಾವುದೇ ಹಸಿರು ಇಲ್ಲವೇ ಮರಗಳಿಗಾಗಲಿ ಕೇಡನ್ನುಂಟುಮಾಡಬಾರದು ಎಂದೂ ಮಾನವರಲ್ಲಿ ಯಾರ ಹಣೆಯ ಮೇಲೆ ದೇವರ ಮುದ್ರೆಯಿಲ್ಲವೋ ಅಂಥವರಿಗೆ ಮಾತ್ರ ಕೇಡು ಮಾಡಬಹುದೆಂದೂ ಅಪ್ಪಣೆಯಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳಿಗೆ ಹಣೆಯ ಮೇಲೆ ದೇವರ ಮುದ್ರೆಯನ್ನು ಹಾಕಿಸಿಕೊಳ್ಳದ ಮನುಷ್ಯರನ್ನು ಬಿಟ್ಟು, ಭೂಮಿಯ ಮೇಲಿನ ಹುಲ್ಲು ಅಥವಾ ಯಾವುದೇ ಪಲ್ಯ ಅಥವಾ ಮರ, ಈ ಯಾವುದಕ್ಕೂ ತೊಂದರೆ ಕೊಡಬಾರದೆಂಬುದಾಗಿ ಹೇಳಲಾಯಿತು.