Revelation 9:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನಗಳಲ್ಲಿ ಜನರು ಸಾಯುವುದಕ್ಕೆ ಮಾರ್ಗವನ್ನು ಹುಡುಕಿದರೂ ಅವರಿಗೆ ಸಿಕ್ಕುವುದಿಲ್ಲ. ಅವರು ಮರಣವನ್ನು ಬಯಸಿದರೂ ಮರಣವು ಅವರಿಗೆ ಮರೆಯಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.
Kannada BSI Bible 2016
ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವದಿಲ್ಲ; ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿಹೋಗುವದು.
Kannada Bible (KNCL) BSI 2016
ಆಂಥ ದಿನಗಳಲ್ಲಿ ಮನುಷ್ಯರು ಮರಣವನ್ನು ಅಪೇಕ್ಷಿಸುವರು. ಆದರೆ ಅದು ಅವರಿಗೆ ಪ್ರಾಪ್ತವಾಗುವುದಿಲ್ಲ. ಸತ್ತರೆ ಸಾಕೆಂದು ಬಯಸುವರು; ಪ್ರಯತ್ನಿಸುವರು. ಆದರೆ ಮೃತ್ಯು ಅವರಿಂದ ದೂರ ಸರಿಯುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನಗಳಲ್ಲಿ ಜನರು ಮರಣವನ್ನು ಹುಡುಕುವರು, ಆದರೆ ಅದನ್ನು ಯಾವ ರೀತಿಯಿಂದಲೂ ಕಾಣರು; ಅವರು ಸಾಯಲು ಹಾರೈಸುವರು, ಆದರೆ ಮರಣವು ಅವರಿಂದ ಓಡಿ ಹೋಗುವುದು.