Revelation 9:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಿಯತಮತೆಗಳು ಯುದ್ಧಕ್ಕೆ ಸಿದ್ಧಪಡಿಸಿದ ಕುದುರೆಗಳಂತೆ ಕಾಣುತ್ತಿದ್ದವು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆ ಎನೋ ಇದ್ದವು; ಅವುಗಳ ಮುಖಗಳು ಮಾನವರ ಮುಖಗಳಂತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮಿಡತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು.
Kannada BSI Bible 2016
ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ವಿುಡಿತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು; ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆ ಏನೋ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.
Kannada Bible (KNCL) BSI 2016
ಆ ಮಿಡತೆಗಳು ನೋಡುವುದಕ್ಕೆ ಸಮರಕ್ಕೆ ಸನ್ನದ್ಧರಾಗಿರುವ ಕುದುರೆಗಳಂತಿದ್ದವು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟವಿದ್ದಂತೆ ಕಾಣಿಸುತ್ತಿತ್ತು. ಮುಖಗಳು ಮನುಷ್ಯರ ಮುಖಗಳಂತೆ ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮಿಡತೆಗಳು ಯುದ್ಧಕ್ಕೆ ಸನ್ನದ್ಧವಾದ ಕುದುರೆಗಳಂತಿದ್ದವು. ಅವುಗಳ ತಲೆಯ ಮೇಲೆ ಚಿನ್ನದಂತಿರುವ ಕಿರೀಟಗಳಿದ್ದವು. ಅವುಗಳ ಮುಖವು ಮಾನವರ ಮುಖಗಳಂತೆ ಇದ್ದವು.