Romans 1:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮ್ಮನ್ನು ನೋಡಲು, ನಿಮ್ಮನ್ನು ಬಲಗೊಳಿಸಲು, ನಿಮಗೆ ಆತ್ಮಿಕ ಉಡುಗೊರೆಯನ್ನು ಕೊಡಲು ಅತ್ಯಾಸಕ್ತಿ ಉಳ್ಳವನಾಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.
Kannada BSI Bible 2016
ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮುಖಾಂತರವಾಗಿ ನಿಮಗೆ ಪಾರಮಾರ್ಥಿಕ ವರವೇನಾದರೂ ದೊರಕಿ ನೀವು ದೃಢವಾಗುವದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ನೀವು ನನ್ನ ನಂಬಿಕೆಯಿಂದ ಸಹಾಯಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.
Kannada Bible (KNCL) BSI 2016
ನಾನು ನಿಮ್ಮನ್ನು ಕಂಡು, ನಿಮ್ಮೊಡನೆ ಅಧ್ಯಾತ್ಮಿಕ ವರಗಳನ್ನು ಹಂಚಿಕೊಂಡು, ನಿಮ್ಮನ್ನು ದೃಢಪಡಿಸಲು ಅತ್ಯಾಸಕ್ತಿಯಿಂದಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ದೃಢಪಡಿಸುವುದಕ್ಕಾಗಿ ನಾನು ನಿಮಗೆ ಕೆಲವು ಆತ್ಮಿಕ ವರಗಳನ್ನು ಕೊಡಲು ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.