Romans 1:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.
Kannada BSI Bible 2016
ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನನ್ನ ಕೆಲಸವು ಇತರ ಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂದು ನನ್ನ ಅಪೇಕ್ಷೆ.
Kannada Bible (KNCL) BSI 2016
ಸಹೋದರರೇ, ಈ ವಿಷಯ ನಿಮಗೆ ತಿಳಿದಿರಲಿ; ನನ್ನ ಸೇವೆ ಇತರ ಜನರಲ್ಲಿ ಫಲಪ್ರದವಾದಂತೆ ನಿಮ್ಮಲ್ಲೂ ಫಲಪ್ರದವಾಗಬೇಕೆಂಬ ಉದ್ದೇಶದಿಂದ ನಿಮ್ಮ ಬಳಿಗೆ ಬರಲು ನಾನು ಅನೇಕ ಸಾರಿ ಪ್ರಯತ್ನಿಸಿದೆನು. ಆದರೆ, ಕಾರಣಾಂತರಗಳಿಂದ ಇದುವರೆಗೂ ಬರಲು ಸಾಧ್ಯವಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನನ್ನ ಸೇವೆಯು ಯೆಹೂದ್ಯರಲ್ಲದವರಲ್ಲಿ ಫಲಉಂಟಾದಂತೆ ನಿಮ್ಮಲ್ಲಿಯೂ ಫಲಉಂಟಾಗಬೇಕೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಉದ್ದೇಶಿಸಿದೆನು. ಆದರೆ ಅದಕ್ಕೆ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.