Romans 1:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.
Kannada BSI Bible 2016
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ದೇವರಿಂದ ದೊರಕುವ ನೀತಿಯು ಅದರಲ್ಲಿ ತೋರಿಬರುತ್ತದೆ. ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುವಂಥದಾಗಿದೆ.
Kannada Bible (KNCL) BSI 2016
ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. “ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ,\ ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.