Romans 1:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ತನ್ನ ಕೋಪವನ್ನು ತೋರಿಸುತ್ತಾನೆ, ಏಕೆಂದರೆ ದೇವರ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ಅವರಿಗೆ ಸ್ಪಷ್ಟಪಡಿಸಲಾಗಿದೆ. ಹೌದು, ತನ್ನ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ದೇವರು ಜನರಿಗೆ ಸ್ಪಷ್ಟವಾಗಿ ತೋರಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು.
Kannada BSI Bible 2016
ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದದೆ; ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿದನು.
Kannada Bible (KNCL) BSI 2016
ದೇವರ ವಿಷಯವಾಗಿ ಮಾನವರು ಏನನ್ನು ಅರಿತುಕೊಳ್ಳಲು ಸಾಧ್ಯವೋ ಅದು ಅವರಿಗೆ ಚೆನ್ನಾಗಿ ತಿಳಿದಿದೆ. ದೇವರೇ ಅದನ್ನು ಅವರಿಗೆ ಸ್ಪಷ್ಟಪಡಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ವಿಷಯವಾಗಿ ತಿಳಿಯಬಹುದಾದದ್ದನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. ಏಕೆಂದರೆ ಅದನ್ನು ಅವರಿಗೆ ದೇವರೇ ಪ್ರಕಟಿಸಿದರು.